ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ ಲಗ್ಗೆಯಿಟ್ಟಿದೆ.
ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇಆಫ್‌ಗೆ ಬಂದಿದ್ದ ಆರ್ ಸಿಬಿ ಈ ಪಂದ್ಯದಲ್ಲಿ ಸೋಲುವ ಮೂಲಕ ಟೂರ್ನಿಯಿಂದ ಹೊರಬಿದ್ದಿದೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು.

ನಾಕಯ ಫಾಫ್ ಡುಪ್ಲೆಸಿಸ್ 14 ಎಸೆತಗಳಲ್ಲಿ 17 ರನ್. ವಿರಾಟ್ ಕೊಹ್ಲಿ 34 ರನ್, ಕ್ಯಾಮೆರಾನ್ ಗ್ರೀನ್ 27 ರನ್, ರಜತ್ ಪಟಿದಾರ್ 34 ರನ್, ದಿನೇಶ್ ಕಾರ್ತಿಕ್ 11 ರನ್, ಮಹಿಪಾಲ್ ಲೊಮ್ರೋರ್ 32 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾದರು.
ರಾಜಸ್ಥಾನ ರಾಯಲ್ಸ್ ಪರವಾಗಿ ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ ಕೇವಲ 16 ರನ್ ನೀಡಿ ಒಂದು ವಿಕೆಟ್ ಪಡೆದರು. ಆವೇಶ್ ಖಾನ್ 3 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದುಕೊಂಡರು.

ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ 19 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಬೆನ್ನಟ್ಟಿತು. ಯಶಸ್ವಿ ಜೈಸ್ವಾಲ್ 30 ಎಸೆತಗಳಲ್ಲಿ 45 ರನ್ ಗಳಿಸಿದರೆ, ರಿಯಾನ್ ಪರಾಗ್ 36 ಮತ್ತು ಶಿಮ್ರಾನ್ ಹೆಟ್ಮೆಯರ್ 32 ರನ್ ಗಳಿಸುವ ಮೂಲಕ ರಾಜಸ್ಥಾನ ರಾಯಲ್ಸ್ ಗೆಲುವಿಗೆ ನೆರವಾದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


