Freedom TVರಾಜಕೀಯಸುದ್ದಿ

ಸಚಿವ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಾಲಾಯಕ ಪದ ಬಳಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ

ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು‌ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ ಸಮಾಜದ ಸೇರಿ ದಲಿತ ಸಂಘಟನೆಯಿಂದ ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತದಿಂದ ಮಿನಿ ವಿಧಾನಸೌಧದ ತಹಶಿಲ್ದಾರ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದ ಮರಾಠ ಸಮಾಜದ ಮುಖಂಡರು ಹಾಗೂ ದಲಿತ ಸಂಘಟನೆ ಸಲ್ಲಿಸಿದೆ ಪದಾಧಿಕಾರಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಸಚಿವರಾ ಸಂತೋಷ ಲಾಡ್ ಮರಾಠ ಸಮಾಜದ ಹಿರಿಯರಾಗಿದ್ದಾರೆ. ಸರ್ವ ಸಮಾಜದ ಪ್ರೀತಿಗೆ ಪಾತ್ರರಾಗಿರುವ ಅವರ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರರವರು ಆಕ್ಷೇಪ ಅರ್ಹ ಪದ ಬಳಕೆ ಮಾಡಿರುವುದು ತುಂಬಾ ನೋವುಂಟು ಮಾಡಿದೆ. ಜವಾಬ್ದಾರಿ ಸ್ಥಾನದಲ್ಲಿರುವ ಬಿ ವೈ ವಿಜೆಯೇಂದ್ರರವರು ನಾಲಾಯಕ ಪದ ಬಳಕೆ ಮಾಡಿರುವುದು ಸರಿಯಲ್ಲ.

ಈ ಕೂಡಲೇ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಅಗ್ರಹಿಸಿದರು. ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ತಹಶಿಲ್ದಾರ ಮೂಲಕ ಮನವಿ ಸಲ್ಲಿಸಿದರು. ಒಂದು ವೇಳೆ ನಿರ್ಲಕ್ಷ್ಯ ಕಂಡುಬಂದಲ್ಲಿ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಇದೇವೇಳೆ ಎಚ್ಚರಿಕೆ ನೀಡಿದರು.

Comments (0)

Your email address will not be published. Required fields are marked *

Back to top button