ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹ ಮತ ನೀಡುವಂತೆ ಮನವಿ ಮಾಡಿದ್ದು, ಸಚಿವರಾದ ರಾಮಲಿಂಗ ರೆಡ್ಡಿ ಸುಪುತ್ರಿಯನ್ನು ಈ ಬಾರಿ ನಿಮ್ಮ ಕ್ಷೇತ್ರದಲ್ಲಿ ಗೆಲ್ಲಿಸಿ, ಜನ ಸೇವೆ ಮಾಡಲು ಅವಕಾಶ ನೀಡಿ ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಸೌಮ್ಯ ರೆಡ್ಡಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ನನಗೆ ಮತ ನೀಡುವಂತೆ ಕರೆ ನೀಡಿರುವ ಕನ್ನಡ ಚಿತ್ರ ರಂಗದ ಖ್ಯಾತ ನಟ ಶ್ರೀ ಧ್ರುವ ಸರ್ಜಾ ಹಾಗೂ ಅವರ ಕುಟುಂಬದವರಿಗೆ ಅನಂತ ಧನ್ಯವಾದಗಳು. ಎಂದು ತಿಳಿಸಿದ್ದಾರೆ.