ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಚುನಾವಣೆ ಪ್ರಚಾರದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಜಮೀರ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.
ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಎದೆ ನೋವು ಕಾಣಿಸಿಕೊಂಡಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಇಂದು (ಏಪ್ರಿಲ್ 15) ಸಂಜೆ ನಾಲ್ಕು ಗಂಟೆ ನಡೆಯುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಜಮೀರ್ ಅಹಮ್ಮದ್ ಖಾನ್ ಅವರನ್ನು ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದ್ರೋಗ ತಜ್ಞ ಕಾರ್ತಿಕ್ ಅವರು ಚಿಕಿತ್ಸೆ ನೀಡಿದ್ದು, ಅದೃಷ್ಟವಶಾತ್ ಅಂತಹ ಗಂಭೀರವಾಗಿ ಏನು ಆಗಿಲ್ಲ ಎಂದು ತಿಳಿದುಬಂದಿದೆ.
ಜಮೀರ್ ಅಹ್ಮದ್ ಖಾನ್ ಡಿಸ್ಚಾರ್ಜ್
ಎದೆನೋವಿನಿಂದ ಕೂಡಲೇ ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಇದೀಗ ಆರಾಮಾಗಿದ್ದಾರೆ. ಇಸಿಜಿ, ಎಕೋ ಎಲ್ಲಾ ನಾರ್ಮಲ್ ಆಗಿರುವುದರಿಂದ ಜಮೀರ್ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ಬೆಳಗ್ಗೆ ಒಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್ ಸಮಸ್ಯೆ ಆಗಿತ್ತು. ಇಸಿಜಿ, ಎಕೋ ಎಲ್ಲಾ ನಾರ್ಮಲ್ ಇದೆ. ಕೆಲ ಹೊತ್ತಿನ ಬಳಿಕ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗಿ ಆಗುತ್ತೇನೆ ಎಂದು ಹೇಳಿದರು.