Wednesday, April 30, 2025
35.6 C
Bengaluru
LIVE
ಮನೆರಾಜಕೀಯJDS​ ಎಂಎಲ್​ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ, ಜೈಲಿನಲ್ಲಿ ಅಣ್ತಮ್ಮಾಸ್

JDS​ ಎಂಎಲ್​ಸಿ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ, ಜೈಲಿನಲ್ಲಿ ಅಣ್ತಮ್ಮಾಸ್

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​, ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಇಂದು (ಜುಲೈ 03) ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಈಗಾಗಲೇ ಅವರ ಸಹೋದರ ಪ್ರಜ್ವಲ್ ಸಹ ಇದೇ ಜೈಲಿನಲ್ಲಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ಕೋರ್ಟ್​ಗೆ ಹಾಜರುಪಡಿಸಿದ್ದಾಗ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದರು. ಬಳಿಕ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಆರೋಪಿ ಸೂರಜ್ ರೇವಣ್ಣನನ್ನು ತಮ್ಮವಶಕ್ಕೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ನ್ಯಾಯಾಂಗ ಬಂಧನದಲ್ಲಿದ್ದ ಸೂರಜ್ ರೇವಣ್ಣನನ್ನು ಜುಲೈ 03ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು. ಅದರಂತೆ ಇಂದು ಕಸ್ಟಡಿ ಮುಗಿದಿದ್ದರಿಂದ ಸೂರಜ್​ನನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದು, ಇದೀಗ ಕೋರ್ಟ್​ ಜುಲೈ 18ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಸೂರಜ್ ರೇವಣ್ಣ ಸಹೋದರ ಪ್ರಜ್ವಲ್ ರೇವಣ್ಣ ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದೀಗ ಸೂರಜ್ ಸಹ ಇದೇ ಜೈಲು ಸೇರಿದ್ದಾರೆ. ಇನ್ನು ಮಧ್ಯಾಹ್ನ ಅಷ್ಟೇ ರೇವಣ್ಣ ಜೈಲಿಗೆ ಭೇಟಿ ನೀಡಿ ಪ್ರಜ್ವಲ್​ ಭೇಟಿಯಾಗಿದ್ದರು.

ಇನ್ನೊಂದೆಡೆ ಸೂರಜ್​ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು 42ನೇ ಎಸಿಎಂಎಂ ಕೋರ್ಟ್ ನಾಳೆಗೆ (ಜುಲೈ 04) ಮುಂದೂಡಿದೆ. ಸೂರಜ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೈಗೆತ್ತುಕೊಂಡ ಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ನಾಳೆಗೆ ವಿಚಾರಣೆ ಮುಂದೂಡಿದೆ.

ಇನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನಿಗಾಗಿ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್​ ಮೊರೆ ಹೋಗಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments