ಬೆಂಗಳೂರು: ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿಯಾಗಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು. ಎಂದು ಬರೆದುಕೊಂಡಿದ್ದಾರೆ.