ಜಿಲ್ಲೆ

ಜಿ.ಪಂ. ಸಿಇಒ ಸಂಚಾರ; ಕಾರ್ಮಿಕರ ಆರೋಗ್ಯ ವಿಚಾರಣೆ

ಧಾರವಾಡ:  ಜಿಲ್ಲೆಯ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ ಗ್ರಾಮಕ್ಕೆ, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಭೇಟಿ ನೀಡಿದ್ದರು.

ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ದೇವಲಿಂಗಿಕೊಪ್ಪ ಹಾಗೂ ಜಮ್ಮಿಹಾಳ್ ಗ್ರಾಮಗಳ ಕಾಲುವೆ ನಿರ್ಮಾಣ ಮತ್ತು ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಜೊತೆಗೆ ಪಂಚಾಯಿತಿ ಅಧಿಕಾರಿಗಳಿಗೆ, ಕಾಮಗಾರಿಗಳಲ್ಲಿ ಪಾರದರ್ಶಕತೆ ಕಾಪಡಿಕೊಳ್ಳುವಂತೆ ಸೂಚನೆ ನೀಡಿದರು. ಇದೇ ವೇಳೆ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿಡಿಓ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button