ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು ಫೋಟೊ ತೆಗೆಸಿಕೊಂಡರು.