ಮುಂಬೈ:ಹಿನ್ನಲೆ ಗಾಯಕ ಅಭಿಜೀತ್ ಭಟ್ಟಾಚಾರ್ಯ ಅವರು ಇತ್ತೀಚೆಗೆ ಮಹಾತ್ಮ ಗಾಂಧಿಯವರ ಕುರಿತಾದ ವಿವಾದ್ಮಕ ಹೇಳಿಕೆಯೋಂದನ್ನು ನೀಡಿದ್ದಾರೆ.ಮಹಾತ್ಮಾ ಗಾಂಧಿ ಭಾರತಕ್ಕಲ್ಲ, ಅವರು ಪಾಕಿಸ್ತಾನಕ್ಕೆ ರಾಷ್ಟ್ರಪಿತ’ ಎಂದು ಖ್ಯಾತ ಗಾಯಕ ಅಭಿಜಿತ್ ಭಟ್ಟಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಶುಭಾಂಕರ್ ಮಿಶ್ರಾ ಅವರ ಜತೆ ಪೋಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ ಅವರು, ಭಾರತ ಈ ಮೊದಲೇ ಇದ್ದ ದೇಶ. ಪಾಕಿಸ್ತಾನವು ಭಾರತದಿಂದ ಭಾಗವಾಗಿ ಹೋಯಿತು. ಅದಕ್ಕೆಮಹಾತ್ಮಗಾಂಧೀಜಿಯವರೇ ಕಾರಣ. ಆದರೆ ದುರದೃಷ್ಟವಶಾತ್ ನಾವು ಗಾಂಧೀಜಿಯನ್ನು ಭಾರತದ ರಾಷ್ಟ್ರಪಿತ ಎಂದು ಕರೆಯುತ್ತಿದ್ದೇವೆ. ಆದರೆ ನಿಜವಾಗಿಯೂ ಮಹಾತ್ಮಾ ಗಾಂಧೀಜಿ ಅವರು ಪಾಕಿಸ್ತಾನದ ರಾಷ್ಟ್ರಪಿತ ಎಂದು ಹೇಳಿದ್ದಾರೆ.