Top Newsಜಿಲ್ಲೆರಾಜ್ಯಸುದ್ದಿ

ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ: ಗ್ಯಾಂಗ್‌ ರೇಪ್‌ ಆರೋಪಿಯ ಕಾಲಿಗೆ ಕಿತ್ತೂರು ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ರಮೇಶ್ ವಿರುದ್ಧ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದವು.

ಈ ಹಿನ್ನೆಲೆ ಇಂದು ಮುಂಜಾನೆ 6 ಗಂಟೆಗೆ ಆರೋಪಿ ರಮೇಶ್‌ ಕಿಲ್ಲಾರ್‌ ಬಂಧನಕ್ಕೆ ಪೊಲೀಸರು ತೆರಳಿದ್ದಾಗ ಆರೋಪಿ ಪೊಲೀಸ್‌ ಪೇದೆ ಷರೀಫ್‌ ದಫೇದಾರ್‍ಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಪಿಎಸ್‌ಐ ಪ್ರವೀಣ್‌ ಗೊಂಗೊಳ್ಳಿ ಎಚ್ಚರಿಕೆ ನೀಡಿದ್ದಾರೆ. ಆರೋಪಿ ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ, ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಆರೋಪಿಯನ್ನು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Comments (0)

Your email address will not be published. Required fields are marked *

Back to top button