
ಧಾರವಾಡ : ಗ್ಯಾಸ್ ಗೀಸರ್ ಸ್ಫೋಟಗೊಂಡು ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ.
ಅಣ್ಣಿಗೇರಿ ಪಟ್ಟಣದ ಉದಯ ನಗರದ ನಿವಾಸಿ ಮೊಹಮ್ಮದ್ ಎಂಬುವವರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆಯ ಗೋಡೆ ಕುಸಿದು ಬಿದ್ದಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ತಾಯಿ ಮತ್ತು ಇಬ್ಬರು ಮಕ್ಕಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಈ ಘಟನೆ ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




