Top Newsರಾಜ್ಯಸುದ್ದಿ

ಕೊಪ್ಪಳ ಜಾತ್ರೆಯಲ್ಲಿ ಫಲ ಪುಷ್ಪ ಪ್ರದರ್ಶನ

ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆವರಣದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ ಗವಿಸಿದ್ದೇಶ್ವರ ಜಾತ್ರೆಗೆ ಬಂದಿರುವ ಭಕ್ತರನ್ನ ಕೈಬೀಸಿ ಕರೆಯುತ್ತಿದೆ.

ಹತ್ತು ಹಲವು ವಿಶೇಷತೆಯಿಂದ ಕೂಡಿರುವ ಕೊಪ್ಪಳ ಗವಿ ಸಿದ್ದೇಶ್ವರ ಜಾತ್ರೆಯಲ್ಲಿ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಐದು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಅದರಲ್ಲಿರುವ ವಿಮಾನ ಮಾದರಿಯಲ್ಲಿ ಸಿದ್ಧವಾದ ಫಲ – ಪುಷ್ಪ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಕೊಪ್ಪಳಕ್ಕೆ ವಿಮಾನ ನಿಲ್ದಾಣದ ಅವಶ್ಯಕತೆ ಇದ್ದು ಕಾರಣ ವಿಮಾನ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ವಿಮಾನ ಮಾದರಿಯ ಮುಂದೆ ಸೆಲ್ಪಿಗಾಗಿ ಜನರು ಮುಗಿಬಿದಿದ್ದಾರೆ.

Comments (0)

Your email address will not be published. Required fields are marked *

Back to top button