bengaluru

GBA ಚುನಾವಣೆಗೆ ಕಾಲಾವಕಾಶ ಕೊಡಿ – ಸುಪ್ರೀಂಗೆ ರಾಜ್ಯ ಸರ್ಕಾರ ಅರ್ಜಿ!

Government files petition with Supreme Court to extend time for GBA elections!

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆ ನಡೆಸಲು ಕಾಲಾವಕಾಶ ವಿಸ್ತರಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಹಿಂದೆ ಆಗಸ್ಟ್ 31ರೊಳಗೆ ಚುನಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿತ್ತು. ಇದೀಗ ಸರ್ಕಾರವು ಮೇ 20ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದೆ. ಅದರಂತೆ, ಚುನಾವಣೆ ನಡೆಸಲು ಡಿಸೆಂಬರ್ 31, 2026ರವರೆಗೆ ಸಮಯ ವಿಸ್ತರಣೆ ನೀಡಬೇಕೆಂದು ಮನವಿ ಮಾಡಿದೆ.

ಸಮಯ ವಿಸ್ತರಣೆಗೆ ಕಾರಣವೇನು?

ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ’ (SIR) ಪ್ರಕ್ರಿಯೆಯೇ ಈ ವಿಳಂಬಕ್ಕೆ ಮುಖ್ಯ ಕಾರಣ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ಸ್ಪಷ್ಟಪಡಿಸಿದೆ.

  • ಮತದಾರರ ಪಟ್ಟಿ ಪರಿಷ್ಕರಣೆ: ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸುವುದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದು ಮತ್ತು ಅವುಗಳ ವಿಚಾರಣೆ ನಡೆಸುವ ಪ್ರಕ್ರಿಯೆಗಳು ಇನ್ನೂ ಪೂರ್ಣಗೊಂಡಿಲ್ಲ.
  • ಸಿಬ್ಬಂದಿಯ ಕೊರತೆ: ಚುನಾವಣಾ ಕೆಲಸ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಎರಡಕ್ಕೂ ಅಗತ್ಯವಿರುವ ಸಿಬ್ಬಂದಿ ಒಂದೇ ಆಗಿರುವುದರಿಂದ, ಕೆಲಸದ ಒತ್ತಡ ಹೆಚ್ಚಾಗಿದೆ.
  • ಸುಮಾರು 8,972 ಬಿಎಲ್‌ಓಗಳು (BLO), 938 ಮೇಲ್ವಿಚಾರಕರು, 28 ಇಆರ್‌ಒಗಳು (ERO) ಮತ್ತು 75 ಸಹಾಯಕ ಇಆರ್‌ಒಗಳು ಸದ್ಯ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಐದು ಬೆಂಗಳೂರು ನಗರ ಪಾಲಿಕೆಗಳಿಗೆ ಚುನಾವಣೆಗಳುನಡೆಯಬೇಕಾಗಿತ್ತು. 31 ಆಗಸ್ಟ್ 2026 ರೊಳಗೆ ಚುನಾವಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿತ್ತು. 20 ಮೇ 2026 ರ ಆದೇಶವನ್ನು ಮಾರ್ಪಡಿಸುವಂತೆ ಸರ್ಕಾರ ಕೋರಿದೆ.

Comments (0)

Your email address will not be published. Required fields are marked *

Back to top button