ರಾಜ್ಯಸುದ್ದಿ

2 ಬಾಟಲ್ ಎಣ್ಣೆ ಗ್ಯಾರಂಟಿ : ಜೆಡಿಎಸ್​ ಶಾಸಕನ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವಲ್ಲಿ ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರವಹಿಸಿದ್ದವು. ಅಂತೆಯೇ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನವನ್ನು ಮಾಡಿದ್ರು. ಜೆಡಿಎಸ್​ ಶಾಸಕರೊಬ್ಬರು ಪುರಷರಿಗೊಂದು ಗ್ಯಾರಂಟಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಫ್ರೀ ಬಸ್ ಕೊಟ್ರು, ಗೃಹ ಲಕ್ಷ್ಮಿಯರಿಗೂ ಹಣ ಸೇರಿತು. ಇದೇ ಗ್ಯಾರಂಟಿ ಯೋಜನೆ ಅಡಿ ಪುರುಷರಿಗೆ 2 ಮದ್ಯ ಬಾಟಲಿ ಫ್ರೀ ಕೊಟ್ಟಿದ್ರೆ ಚೆನ್ನಾಗಿರುತ್ತಿತ್ತು ಅಂತ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಸಲಹೆ ನೀಡಿದ್ದಾರೆ.

ದುಡಿಯುವ ಕಾರ್ಮಿಕರು, ಜನರು ಮದ್ಯ ಸೇವಿಸುತ್ತಾರೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಪುರುಷರಿಗೆ ಉಚಿತವಾಗಿ ಮದ್ಯ ವಿತರಿಸುವ ಯೋಜನೆಯನ್ನ ರಾಜ್ಯ ಸರ್ಕಾರ ತರಬೇಕು. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಿಸಬೇಕು ಎಂದು ಜೆಡಿಎಸ್ ಶಾಸಕ ಕೃಷ್ಣಪ್ಪ ಸಲಹೆ ನೀಡಿದ್ದಾರೆ.

Comments (0)

Your email address will not be published. Required fields are marked *

Back to top button