ಚಿಕ್ಕೋಡಿ: ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ, ರೈತ ಮಹಿಳೆಯರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು.
50 ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಡುತ್ತಿದ್ದೇವೆ. ಬೇಗ ಪರಿಹಾರ ಕೊಡಿ; ಇಲ್ಲದಿದ್ದರೆ ಸಾಯಲು ಬಿಡಿ. ನೀರಾವರಿ ಇಲಾಖೆಯ ಅಧಿಕಾರಿಗಳ ಹೆಸರು ಬರೆದಿಟ್ಟು ನಾವೆಲ್ಲ ಕೀಟನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದೂ ಮಹಿಳೆಯರು ಜಮೀನು ಸರ್ವೆಗೆ ಬಂದಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
https://youtu.be/NWCrXRCviX4?si=ZhX-jrvbZM-n-q3z