Top Newsಜಿಲ್ಲೆದೇಶ/ವಿದೇಶರಾಜ್ಯಸುದ್ದಿಹಣಕಾಸು

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ

ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 830 ರೂಪಾಯಿಯಷ್ಟು ಗಣನೀಯವಾಗಿ ಇಳಿಕೆಯಾಗಿದೆ. ಇದರಿಂದಾಗಿ ಆಭರಣಪ್ರಿಯರಿಗೆ ದೊಡ್ಡ ಸಮಾಧಾನ ತಂದಿದೆ. ಕೇವಲ ಕೆಲವೇ ದಿನಗಳಲ್ಲಿ ಚಿನ್ನದ ದರದಲ್ಲಿ ಸುಮಾರು ಎರಡು ಸಾವಿರ ರೂಪಾಯಿಯಷ್ಟು ಇಳಿಕೆ ದಾಖಲಾಗಿರುವುದು ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ.

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 22 ಕ್ಯಾರಟ್‌ನ ಒಂದು ಗ್ರಾಮ್ ಆಭರಣ ಚಿನ್ನದ ಬೆಲೆ 13,890 ರೂಪಾಯಿಗೆ ತಲುಪಿದೆ. ಅದೇ ರೀತಿ, 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 15,153 ರೂಪಾಯಿಗೆ ಇಳಿಕೆಯಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ 11,365 ರೂಪಾಯಿಯಷ್ಟಿದೆ. ಬೆಂಗಳೂರಿನಲ್ಲಿ 10 ಗ್ರಾಮ್ ಚಿನ್ನದ ದರ ಈಗ 1,38,900 ರೂಪಾಯಿ ಆಗಿದ್ದು, ದೆಹಲಿ, ಮುಂಬೈ ಮತ್ತು ಚೆನ್ನೈ ಸೇರಿದಂತೆ ಬಹುತೇಕ ನಗರಗಳಲ್ಲಿ ಬೆಲೆಯು ಇದೇ ಮಟ್ಟದಲ್ಲಿ ಸ್ಥಿರವಾಗಿದೆ. ವಿದೇಶಿ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ತಗ್ಗಿದ್ದು, ದುಬೈ ಮತ್ತು ಕುವೇತ್‌ನಂತಹ ರಾಷ್ಟ್ರಗಳಲ್ಲಿ ಭಾರತಕ್ಕಿಂತಲೂ ಕಡಿಮೆ ದರದಲ್ಲಿ ಚಿನ್ನ ಲಭ್ಯವಾಗುತ್ತಿದೆ.

ಚಿನ್ನದ ಬೆಲೆಯ ಜೊತೆಗೆ ಬೆಳ್ಳಿಯ ದರದಲ್ಲೂ ದೊಡ್ಡ ಮಟ್ಟದ ಕುಸಿತ ಉಂಟಾಗಿದೆ. ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ ಬರೋಬ್ಬರಿ 50 ರೂಪಾಯಿ ಕಡಿಮೆಯಾಗಿದ್ದು, ಪ್ರಸ್ತುತ 300 ರೂಪಾಯಿಗೆ ಲಭ್ಯವಿದೆ. ಅಂದರೆ, ಒಂದು ಕಿಲೋ ಬೆಳ್ಳಿಯ ಬೆಲೆ ಈಗ 3,00,000 ರೂಪಾಯಿಯಷ್ಟಿದೆ. ಬೆಂಗಳೂರು, ಮುಂಬೈ ಮತ್ತು ಚೆನ್ನೈ ಸೇರಿದಂತೆ ದೇಶದಾದ್ಯಂತ ಬೆಳ್ಳಿ ಬೆಲೆಯಲ್ಲಿ ಏಕರೂಪದ ಇಳಿಕೆ ಕಂಡುಬಂದಿದೆ. ಹೂಡಿಕೆದಾರರು ಮತ್ತು ಆಭರಣ ಖರೀದಿದಾರರಿಗೆ ಈ ಬೆಲೆ ಇಳಿಕೆಯು ವರದಾನವಾಗಿದ್ದು, ಮಾರುಕಟ್ಟೆಯಲ್ಲಿ ವಹಿವಾಟು ಚುರುಕುಗೊಳ್ಳುವ ನಿರೀಕ್ಷೆಯಿದೆ.

Comments (0)

Your email address will not be published. Required fields are marked *

Back to top button