ದೇಶ/ವಿದೇಶರಾಜ್ಯಸುದ್ದಿಹಣಕಾಸು

ಚಿನ್ನದ ದರದಲ್ಲಿ ಭರ್ಜರಿ ಏರಿಕೆ; ಆಭರಣ ಪ್ರಿಯರಿಗೆ ಶಾಕ್..!

ವಾರವಿಡೀ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವಾರಾಂತ್ಯದಲ್ಲಿ ಏರಿಕೆ ಆಗುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ. ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 390 ರೂಪಾಯಿಗಳಷ್ಟು ಭರ್ಜರಿಯಾಗಿ ಏರಿಕೆಯಾಗಿದ್ದರೆ, ಬೆಳ್ಳಿ ದರವು ಪ್ರತಿ ಗ್ರಾಮ್‌ಗೆ 10 ರೂಪಾಯಿಗಳಷ್ಟು ಹೆಚ್ಚಳ ಕಂಡಿದೆ. ಈ ಏರಿಕೆಯೊಂದಿಗೆ ಆಭರಣ ಚಿನ್ನದ ಬೆಲೆ ಮತ್ತೆ 14,000 ರೂಪಾಯಿಗಳ ಗಡಿಯನ್ನು ದಾಟಿದೆ.

ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಮುಂಬೈ ಮತ್ತು ಕೋಲ್ಕತಾದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 14,355 ರೂಪಾಯಿಗಳಿದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 15,660 ರೂಪಾಯಿಗಳಿಗೆ ತಲುಪಿದೆ. ಬೆಳ್ಳಿ ಬೆಲೆ ಬೆಂಗಳೂರು ಸೇರಿದಂತೆ ಬಹುತೇಕ ನಗರಗಳಲ್ಲಿ ಪ್ರತಿ ಗ್ರಾಮ್‌ಗೆ 285 ರೂಪಾಯಿಗಳಂತೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಚಿನ್ನದ ದರ ಸ್ವಲ್ಪ ಮಟ್ಟಿಗೆ ಹೆಚ್ಚಿದ್ದು, ಪ್ರತಿ ಗ್ರಾಮ್‌ಗೆ 14,420 ರೂಪಾಯಿಗಳಷ್ಟಿದೆ.

ಜಾಗತಿಕ ಮಟ್ಟದಲ್ಲೂ ಬೆಲೆ ಏರಿಕೆ ಕಂಡುಬಂದಿದ್ದು, ದುಬೈನಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಪ್ರತಿ ಗ್ರಾಮ್ ಚಿನ್ನಕ್ಕೆ 13,866 ರೂಪಾಯಿ ಇದೆ. ಅಮೆರಿಕ ಮತ್ತು ಕುವೇತ್‌ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಚಿನ್ನದ ದರ ಗಣನೀಯವಾಗಿ ಹೆಚ್ಚಿರುವುದು ಕಂಡುಬಂದಿದೆ. ಮದುವೆ ಸೀಸನ್ ಆರಂಭವಾಗುತ್ತಿರುವ ಸಮಯದಲ್ಲಿ ದರ ಏರಿಕೆಯಾಗಿರುವುದು ಮಧ್ಯಮ ವರ್ಗದವರಿಗೆ ಚಿಂತೆಯಾಗಿದೆ.

Comments (0)

Your email address will not be published. Required fields are marked *

Back to top button