
ಬೆಂಗಳೂರು: ಶೂಲ್ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡು ಹಾಡುಗಳು ಪ್ರೇಕ್ಷಕರ ಮನಗೆದ್ದಿದೆ. ಇದೀಗ ಈ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರವಿದು ಎಂದು ನಟ ಗಣೇಶ್ ಮಾತನಾಡಿದ್ದಾರೆ.

‘ದಂಡುಪಾಳ್ಯ’ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ, ಓ ಇದು ನನ್ನ ಜಾನರ್‌ನ ಚಿತ್ರ ಅನಿಸಿತು. ‘ಕೃಷ್ಣಂ ಪ್ರಣಯ ಸಖಿ’ ಉತ್ತಮ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು, ನನಗೆ ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು. ಪ್ರಶಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ‘ಕೃಷ್ಣಂ ಪ್ರಣಯ ಸಖಿ’ ನನ್ನ ಈವರೆಗಿನ ವೃತ್ತಿ ಜೀವನದ ಬಿಗ್ ಬಜೆಟ್‌ನ ಚಿತ್ರ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿದ್ದಾರೆ.

ಇದು ಗಣೇಶ್‌ಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ ‘ಚಿನ್ನಮ್ಮ’ ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಸಿನಿಮಾ ನೋಡಿ ಹಾರೈಸಿ ಎಂದು ನಿರ್ದೇಶಕ ಶ್ರೀನಿವಾಸರಾಜು ಮಾತನಾಡಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಿ ಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದರು. ಮಾಳವಿಕಾ ನಾಯರ್, ಶರಣ್ಯ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು ನಟಿಸಿದ್ದಾರೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com




