ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ಡಬಲ್ ಸಿಹಿ ಸುದ್ದಿ ಸಿಕ್ಕಿದೆ. ಅವರ ನೆಚ್ಚಿನ ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಸಾಂಗ್ ಒಂದು ಕಡೆ ರಿಲೀಸ್ ಆದ್ರೆ ಮತ್ತೊಂದೆಡೆ ಸಿನಿಮಾ ತಂಡ ಡೆವಿಲ್ ಚಿತ್ರದ ಬಿಡುಗಡೆ ದಿನಾಂಕವನ್ನು ಕೂಡ ಘೋಷಣೆ ಮಾಡಿದೆ.
ಸಾಮಾಜಿಕ ಜಾಲತಾಣದಲ್ಲಿ ಇದ್ರೆ ನೆಮ್ಮದಿಯಾಗ್ ಇರ್ಬೇಕ್ ಹಾಡು ರಿಲೀಸ್ ಆಗಿದ್ದು ಭಾರಿ ಸದ್ದು ಮಾಡುತ್ತಿದೆ. ದರ್ಶನ್ ಜೈಲಿಗೆ ಹೋಗುವ ಮುನ್ನ ಡೆವಿಲ್ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ಇದೀಗ ಚಿತ್ರತಂಡ ದರ್ಶನ್ ಅನುಮಸ್ಥಿತಿಯಲ್ಲೇ ಸಿನಿಮಾ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿದೆ.
ಇದೇ ವರ್ಷ ಡಿಸೆಂಬರ್ 12ರಂದು ಡೆವಿಲ್ ಸಿನಿಮಾ ಅದ್ಧೂರಿಯಾಗಿ ತೆರೆ ಕಾಣಲಿದೆ. ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ಡೆವಿಲ್ಸಿ ನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನ, ಅಜನೀಶ್ ಲೋಕನಾಥ್ ಸಂಗೀತ ಸಿನಿಮಾಗೆ ನೀಡಿದ್ದಾರೆ.
ಇನ್ನು ಚಿತ್ರದ ಬಗ್ಗೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 2011ರಲ್ಲಿ ದರ್ಶನ್ ಜೈಲುಪಾಲಾಗಿದ್ದಾಗ ದರ್ಶನ್ ನಟನೆಯ ಸಾರಥಿ ಸಿನಿಮಾ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು.