ಸಾರಿಗೆ ಇಲಾಖೆಯು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಿಹಿಸುದ್ದಿ ನೀಡಿದೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಇನ್ನು ಮುಂದೆ ಯಾವುದೇ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯ ಉಚಿತವಾಗಿ ಸಿಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಉಚಿತ ಚಿಕಿತ್ಸಾ ಸೌಲಭ್ಯಗಳ ನೀಡುವ ಬಗ್ಗೆ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.

ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯ ಉಚಿತವೂ, 21 ಸಾವಿರಕ್ಕೂ ಹೆಚ್ಚಿನ ನೌಕರರಿಗೆ ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸಾರಿಗೆ ಸಿಬ್ಬಂದಿಗೆ ಉಚಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿ, ಮುಂದಿನ 5 ವರ್ಷಗಳ ಅವಧಿಯ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.

ಹೃದಯ ಸಂಬಂಧಿ ತಪಾಸಣೆಗಳನ್ನು ಮಾಡಿಸುವುದರಿಂದ ಸಂಭವನೀಯ ಹೃದಯಾಘಾತವನ್ನು ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸಾಧ್ಯ ವಾಗಲಿದಲಿದೆ. ಹಾಗೂ ಸಾರಿಗೆ ನಿಗಮದ ಬೆಳವಣಿಗೆಯಲ್ಲಿ ಸಿಬ್ಬಂದಿ ಪಾತ್ರ ಬಹುಮುಖ್ಯ. ಆದ್ದರಿಂದ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ. ಜಯದೇವ ಸಂಸ್ಥೆಯ ಡಾ.ಮಂಜುನಾಥ್ ಅವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಈ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ತಿಳಿಸಿದ್ದಾರೆ.
ಹಾಗದರೇ , ಎಷ್ಟು ಮಂದಿಗೆ ಈ ಉಚಿತ ಚಿಕಿತ್ಸಾ ಸೌಲಭ್ಯ?
ನಿಗಮದಲ್ಲಿ 40ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು ವಾರ್ಷಿಕವಾಗಿ 2.55 ಕೋಟಿ ಹಣವನ್ನು ಜಯದೇವ ಆಸ್ಪತ್ರೆಗೆ ಪಾವತಿ ಮಾಡಲಿದೆ. ಈ ಯೋಜನೆಯು ಅಂದಾಜು ಶೇ.62ರಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಹೇಳಿದ್ದಾರೆ.