Freedom TV

ಅಲ್ಪಸಂಖ್ಯಾತರಿಗೆ ಗುಡ್​ ನ್ಯೂಸ್​..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇನೆ. ನಾನು ಮಂಡಿಸುತ್ತಿರುವ ಈ ಬಜೆಟ್ ಮುಂದಿನ ಒಂದು ವರ್ಷಗಳ‌ ಕಾಲ ಕರ್ನಾಟಕವನ್ನು ಸಶಕ್ತಿ, ಸಮೃದ್ಧಿ, ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲಿದೆ ಎನ್ನುವ ಪೂರ್ಣ ವಿಶ್ವಾಸ ನನಗಿದೆ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಹೇಳಿದರು.

2025-26ನೇ ಸಾಲಿನ ನಮ್ಮ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಘೋಷಣೆ ಮಾಡಿದ್ದಾರೆ. ಅವುಗಳ ಮಾಹಿತಿ ಇಲ್ಲಿದೆ.

ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯ..!

ರಾಜ್ಯದಲ್ಲಿರುವ ಗುರುದ್ವಾರಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು 2 ಕೋಟಿ ರೂಪಾಯಿ ಅನುದಾನ

ಬೆಂಗಳೂರಿನಲ್ಲಿರುವ ಮಹಾಭೋಧಿ ಅಧ್ಯಯನ ಕೇಂದ್ರದ ಹಳೆಯ ಗ್ರಂಥಾಲಯವನ್ನು 1 ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿಗಾಗಿ 250 ಕೋಟಿ ರೂಪಾಯಿ ಅನುದಾನ

169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ

ಜೈನ ಅರ್ಚಕರು, ಸಿಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್​ಗಳ ಮಾಸಿಕ ಗೌರವ ಧನ 6000 ರೂಪಾಯಿಗೆ ಹೆಚ್ಚಳ

ಸಿಖ್ ಸಹಾಯಕ ಗ್ರಂಥಿಗಳು ಮತ್ತು ಮೋಝಿನ್​ಗಳ ಮಾಸಿಕ ಗೌರವ ಧನ 5000 ರೂಪಾಯಿಗೆ ಹೆಚ್ಚಳ

ರಾಷ್ಟ್ರಿಯ ವಿದೇಶಿ ವಿದ್ಯಾರ್ಥಿ ವೇತನ 30 ಲಕ್ಷ ರೂಪಾಯಿಗೆ ಹೆಚ್ಚಳ

ಪ್ರಸ್ತುತ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ 500

ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ 100 ಕೋಟಿ ಅನುದಾನ

ಆಯ್ದ ಉರ್ದು ಮಾಧ್ಯಮದ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲು 100 ಕೋಟಿ ಅನುದಾನ

ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಅಗತ್ಯ ಮೂಲಸೌಕರ್ಯಗಳಿಗಾಗಿ 1 ಸಾವಿರ ಕೋಟಿ ಅನುದಾನ

Comments (0)

Your email address will not be published. Required fields are marked *

Back to top button