ಗ್ರಾಹಕರ ತಲೆ ಮೇಲಿದ್ದ ಜಿಎಸ್‌ಟಿ ತೆರಿಗೆ ಬರೆಯನ್ನ ಕೇಂದ್ರ ಸರ್ಕಾರ ಇಳಿಸಿ, ದಸರಾ, ದೀಪಾವಳಿಗೆ ಪ್ರಧಾನಿ ಮೋದಿ ಸರ್ಕಾರ ದೇಶದ ಜನರಿಗೆ ಸಿಹಿಸುದ್ದಿಯನ್ನ ನೀಡಿದೆ.
ಕೆಂಪುಕೋಟೆ ಮೇಲೆ ಮೋದಿ ಮಾಡಿದ್ದ ಘೋಷಣೆ ಕೆಲವೇ ದಿನಗಳಲ್ಲಿ ಜಾರಿಗೆ ಬರಲಿದೆ. ದೇಶದಲ್ಲಿ ಎಲ್ಲ ಫುಡ್, ಟೆಕ್ಸ್ ಟೈಲ್ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರ ಇಳಿಕೆಯಾಗಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯ ನೋವನ್ನ ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು ಪ್ರಧಾನಿ ಮೋದಿ ನೀಡಿದ್ದ ವಾಗ್ದಾನ ನಿಜವಾಗಿದೆ. ಭಾರತದ ಬಡ-ಮಧ್ಯಮ ವರ್ಗದ ಬದುಕು ಬಂಗಾರವಾಗುವ ದಿನ ಹತ್ತಿರವಾಗಿದೆ.
ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬುಧವಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಅನುಮೋದನೆ ನೀಡಿದೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ.
ಪ್ರಸ್ತುತ, ನಾಲ್ಕು GST ಸ್ಲ್ಯಾಬ್‌ಗಳಿದ್ದು, ಶೇ. 5, ಶೇ, 12, ಶೇ. 18 ಮತ್ತು ಶೇ, 28 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ. 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಸಭೆ ಒಪ್ಪಿಗೆ ಸೂಚಿಸಿದ್ದು, ಇದು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ.
ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರು ಬಳಸುವ ವಸ್ತುಗಳ ಮೇಲೆ “ಸಂಪೂರ್ಣ ತೆರಿಗೆ ಕಡಿತ ಮಾಡಲಾಗಿದೆ” ಇದೆ ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ.
ಕೂದಲಿನ ಎಣ್ಣೆ, ಸೋಪು, ಶಾಂಪೂಗಳು, ಹಲ್ಲುಜ್ಜುವ ಬ್ರಷ್‌ಗಳು, ಟೂತ್‌ಪೇಸ್ಟ್, ಸೈಕಲ್‌ಗಳು ಮತ್ತು ಅಡುಗೆ ಸಾಮಾನುಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5 ಕ್ಕೆ ಇಳಿಸಲಾಗಿದೆ.