
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ರಾಯಚೂರು ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ಕೆಎಸ್ ಆರ್ ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿಗಿದೆ. ಪರಿಣಾಮ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, ಬಸ್ ನಲ್ಲಿದ್ದ 15 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ.
ಅಪಘಾತದಲ್ಲಿ ಪ್ರಯಾಣಿಕ ವಿಶ್ವನಾಥ್ ಎಂಬುವವರ ಕಾಲು ಮುರಿದಿದ್ದು, ರಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ, ರಕ್ಷಣಾ ಕಾರ್ಯ ನಡೆಸಲಾಗಿದೆ.




