ದೆಹಲಿ: ಹನಿಟ್ರ್ಯಾಪ್ ಪ್ರಕರಣ ಹಿಂದೆ ಪ್ರಭಾವಿ ಸಚಿವರಿದ್ದಾರೆಂದು ಕಾಂಗ್ರೆಸ್ ಪಕ್ಷದವರೇ ಹೇಳ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಹನಿಟ್ರ‍್ಯಾಪ್ ಪ್ರಕರಣಗಳ ಹಿಂದೆ ಯಾವ ಪ್ರಭಾವಿ ಸಚಿವರಿದ್ದಾರೆ? ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಹನಿಟ್ರ‍್ಯಾಪ್ ಜನಪ್ರತಿನಿಧಿಗಳಿಗೆ, ಸಮಾಜಕ್ಕೆ ಒಂದು ಕಳಂಕ, ಕಂಠಕವಾಗಿ ಪರಿಣಮಿಸಿದೆ. ಇದರ ಗಂಭೀರತೆ ಅರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲವೇ ಹೈಕೋರ್ಟ್ ಮಾನಿಟರಿ ಮೂಲಕ ತನಿಖೆ ನಡೆಸಬೇಕು ಎಂದು ಸಲಹೆ ನೀಡಿದರು.


