Freedom TV

ಉಪರಾಷ್ಟ್ರಪತಿಗಳನ್ನು ಆತ್ಮೀಯವಾಗಿ ಬೀಳ್ಕೊಟ್ಟ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ಮೇ 27: ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರಿಯಿಂದ ಆಯೋಜಿಸಲಾದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಇಂದು ಬೆಂಗಳೂರಿಗೆ ಆಗಮಿಸಿದ್ದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಹಾಗೂ ಶ್ರೀಮತಿ ಸುದೇಶ್ ಧನಕರ್ ಅವರನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಮಯದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಏರ್ ಚೀಪ್ ಮಾರ್ಷಲ್ ನಾಗೇಶ್ ಕಪೂರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ‌ ದಯಾನಂದ್ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments (0)

Your email address will not be published. Required fields are marked *

Back to top button