ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಕೊನೆಗೂ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜ್ಯಪಾಲರು ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆ ವಾಪಾಸ್ ಕಳುಹಿಸಿದ್ದರು.
ಇದಾದ ನಂತರ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿ ಮತ್ತೊಮ್ಮೆ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಕಳುಹಿಸಿದ್ದು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂತಿಮವಾಗಿ ಸುಗ್ರೀವಾಜ್ಞೆಗೆ ಸಹಿ ಹಾಕಿ ಅನುಮೋದನೆ ನೀಡಿದ್ದಾರೆ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳ ಮಿತಿಮೀರಿದ್ದು, ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಬ್ರೆಕ್ ಹಾಕಲು ಮುಂದಾಗಿದೆ.