Tuesday, January 27, 2026
24 C
Bengaluru
Google search engine
LIVE
ಮನೆUncategorizedಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ.ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಮೈಸೂರು ಮೂಲದ ಸ್ನೇಹಮಯಿ ಕೃಷ್ಟ ಹಾಗೂ ಪ್ರದೀಪ್‌ ಎನ್ನುವವರು ಇದೇ ವಿಚಾರದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಗೆ ನೋಟಿಫಿಕೇಷನ್‌ಅನ್ನೂ ಪ್ರತಿಯನ್ನೂ ನೀಡಲಾಗಿದೆ.

ಟಿಜೆ ಅಬ್ರಾಹಂ, ‘ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments