ಬೆಂಗಳೂರು: ಇತ್ತಿಚಿಗೆ ನಡೆದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಿತ್ರರಂಗದ ಕಲಾವಿದರನ್ನ ಉದ್ದೇಶಿಸಿ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯಾರು ಯಾರಿಗೆ ಎಲ್ಲೆಲ್ಲಿ ನಟ್ಟು ಬೋಲ್ಟು ಟೈಟ್ ಮಾಡಬೇಕು ಅನ್ನೋದು ಡಿಕೆಶಿಯವರ ಹೇಳಿಕೆ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು, ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ. ಪಕ್ಷಾತೀತವಾಗಿ ಹೋರಾಟಗಳು ಆಗಬೇಕು ಎಂದು ಅವರು ಅಭಿಪ್ರಾಯಪಟ್ಟರು.


