Friday, August 29, 2025
27.2 C
Bengaluru
Google search engine
LIVE
ಮನೆUncategorizedಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ

ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗುಂಪು ಘರ್ಷಣೆ

ಪಾಟ್ನಾ: ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ನೇತೃತ್ವದ ಮತದಾರರ ಅಧಿಕಾರ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ತಾಯಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಲಾಗಿದೆ ಎಂದು ಆರೋಪಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಚಿವರಾದ ನಿತಿನ್​ ನಬಿನ್​ ಸೇರಿದಂತೆ ಹಿರಿಯ ನಾಯಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸಕಾಕತ್​ ಆಶ್ರಮದ ಕಾಂಗ್ರ್ಎಸ್​​ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್​ ಹಾಗೂ ರಾಹುಲ್​ ಗಾಂಧಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಘರ್ಷಣೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಸ್ಪರ ಎರಡು ಗುಂಪಿನ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇನ್ನು ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಘರ್ಷಣೆಯನ್ನು ತಡೆದಿದ್ದಾರೆ.

ರಾಹುಲ್​ ಗಾಂಧಿ ಸಹ ಬಿಜೆಪಿಯ ಕೃತ್ಯವನ್ನು ಖಂಡಿಸಿದ್ದು, ಅಸತ್ಯ ಹಾಗೂ ಅಹಿಂಸೆ ಮುಂದೆ ಹಿಂಸೆ ಗೆಲ್ಲಲು ಸಾಧ್ಯವಿಲ್ಲ.ಸಂವಿಧಾನ ರಕ್ಷಣೆಯ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments