Freedom tv desk :

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು.

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು.

ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಅಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡುಬರುತ್ತದೆ. ಇದನ್ನು ಪುಟ್ಟ ಪಾಟ್​ನಲ್ಲಿಯೂ ಇಟ್ಟು ಬೆಳೆಸಬಹುದು.

ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸಡ.ಮೀ.ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಸುವಾಸನೆಯನ್ನು ಹೊಂದಿರುತ್ತದೆ. ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ,ಹವಾಮಅನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ,ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ,ಕೆಮ್ಮು ದೂರವಾಗುತ್ತದೆ.

ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಶಿಣ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಚಟ್ನಿ, ತಂಬುಳಿ ಮಅಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ.

By admin

Leave a Reply

Your email address will not be published. Required fields are marked *

Verified by MonsterInsights