ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.
ಲಿಂಗತ್ವ ಅಲ್ಪಸಂಖ್ಯಾತರುಪ್ರಸ್ತುತವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭ ದಲ್ಲಿ ಟ್ರಾನ್ಸ್-ಜೆಂಡರ್‌ಗುರುತಿನ ಚೀಟಿ, ಪಾಸ್‌ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್‌ಕಾರ್ಡ್ ಅನ್ನು ಕಡ್ಡಾಯ ವಾಗಿ ನೀಡಬೇಕಾದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ ತಿಳಿಸಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com