Tuesday, January 27, 2026
24.7 C
Bengaluru
Google search engine
LIVE
ಮನೆರಾಜಕೀಯಹೆಚ್​ಡಿಕೆ - ಸತೀಶ್ ಜಾರಕಿಹೊಳಿ ದಿಲ್ಲಿ ಮೀಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ಜಿಟಿಡಿ

ಹೆಚ್​ಡಿಕೆ – ಸತೀಶ್ ಜಾರಕಿಹೊಳಿ ದಿಲ್ಲಿ ಮೀಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ಜಿಟಿಡಿ

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಭೇಟಿಯಾಗಿರು ಸಾಧ್ಯತೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಸದ್ಯ ರಾಜ್ಯ ರಾಜಕಾರಣದಲ್ಲಿ ಏನುಬೇಕಾದ್ರೂ ಆಗಬಹುದು, ಬೇರೆ ಇನ್ಯಾವುದೋ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರಲು ಸಾಧ್ಯವಿಲ್ಲ ಅಂತ ಹೇಳಿದ್ರು.

ಜೆಡಿಎಸ್‌ನ 18 ಶಾಸಕರ ಬೆಂಬಲವನ್ನು ಅವರು ಕುಮಾರಸ್ವಾಮಿಯವರ ಬಳಿ ಕೇಳಿರಬಹುದು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಬ್ಬರು ನಾಯಕರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿರುವುದನ್ನು ಗಮನಿಸಿದರೆ ಮುಖ್ಯಮಂತ್ರಿಯ ಉದ್ದೇಶವಿರಬೇಕು ಎಂದೆನಿಸುತ್ತದೆ. ಒಂದು ವೇಳೆ ಜೆಡಿಎಸ್ ಅವರಿಗೆ ಬೆಂಬಲವನ್ನು ನೀಡಿದರೆ ತಾವು ಈ ವಿಚಾರದಲ್ಲಿ ತಟಸ್ಥವಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments