ಗುಜರಾತ್: ವಡೋದರಾ ಜಿಲ್ಲೆಯ ಪದ್ರಾ ತಾಲೂಕಿನ ಮುಜ್ಪುರ ಬಳಿಯ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಮಹಿಸಾಗರ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಗಂಭೀರಾ ಸೇತುವೆಯ ಒಂದು ಭಾಗ ಕುಸಿದಿದೆ. ಈ ವೇಳೆ ಸೇತುವೆಯ ಮೇಲೆ ಸಂಚರಿಸುತ್ತಿದ್ದ ಎರಡು ಟ್ರಕ್‌ಗಳು ಮತ್ತು ಎರಡು ವ್ಯಾನ್‌ಗಳು ಸೇರಿದಂತೆ ಐದರಿಂದ ಆರು ವಾಹನಗಳು ನದಿಗೆ ಬಿದ್ದಿದೆ. ನದಿಗೆ ಬಿದ್ದ ವಾಹನಗಳನ್ನು ಹೊರತೆಗೆಯಲಾಗಿದೆ. ಈ ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಯಿತು. ಈ ಸೇತುವೆಯ ನಿಯಮಿತ ನಿರ್ವಹಣೆ ಮತ್ತು ದುರಸ್ಥಿ ಮಾಡಲಾಗುತ್ತಿತ್ತು. ಆದರೆ ಈ ದುರದೃಷ್ಟಕರ ಘಟನೆ ಸಂಭವಿಸಿದೆ ಎಂದು ಗುಜರಾತ್ ಸಚಿವ ಋಷಿಕೇಶ್ ಪಟೇಲ್ ಹೇಳಿದ್ದಾರೆ.
ರಕ್ಷಣಾ ತಂಡಗಳು 10 ಜನರನ್ನು ಜೀವಂತವಾಗಿ ಹೊರಗೆ ತೆಗೆಯುವಲ್ಲಿ ಯಶಸ್ವಿಯಾಗಿದ್ದು, ಗಾಯಾಳುಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತಿದೆ. ಇನ್ನು ಕಾಣೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಡೋದರಾ ಅಗ್ನಿಶಾಮಕ ದಳದ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ಧಾರೆ.


