Top Newsಕ್ರೈಂ ಸ್ಟೋರಿದೇಶ/ವಿದೇಶಸುದ್ದಿ

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್‌ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್‌ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ.

ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್‌ನವನು. ಗುರುಗ್ರಾಮ್‌ನಲ್ಲಿ ಆ್ಯಪ್ ಅಗ್ರಿಗೇಟರ್‌ನಲ್ಲಿ ಯೋಜನಾ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ.

ಕಳೆದ ಬುಧವಾರ, ಪ್ರಿನ್ಸ್ ತಾನು ಎಲ್ಲಿಗೆ ಹೋಗುತ್ತಿದ್ದೇನೆಂದು ತಿಳಿಸದೆ ಮನೆಯಿಂದ ಹೊರಗೆ ಹೋಗಿದ್ದ. ತಮ್ಮ ಫೋನ್‌ನ್ನು ಸಹ ಬಿಟ್ಟು ಹೋಗಿದ್ದ. ಮರುದಿನ ಆತನ ಪತ್ನಿ ಪೊಲೀಸರನ್ನು ಸಂಪರ್ಕಿಸಿ, ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು. ಬಳಿಕ ಪ್ರಿನ್ಸ್‌ ಫೋನ್‌ನ ಬ್ರೌಸಿಂಗ್ ಹಿಸ್ಟರಿ  ಪರಿಶೀಲಿಸಿದಾಗ ಆತ ಆತ್ಮಹತ್ಯೆಗೆ ಸೂಕ್ತ ಜಾಗದ ಬಗ್ಗೆ ಹುಡುಕಿದ್ದ ಎಂದು ತಿಳಿದು ಬಂದಿದೆ.

Comments (0)

Your email address will not be published. Required fields are marked *

Back to top button