ನವದೆಹಲಿ: ದೇಶದ 26ನೇ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್ ಅವರು ನೇಮಕವಾಗಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ ಸಂಬಂಧ ಮಹತ್ವದ ಸಭೆ ನಡೆಸಿತ್ತು. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ಭಾಗಿಯಾಗಿದ್ದರು.
ಕೇರಳ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ರಾಜೀವ್ ಕುಮಾರ್ ಇಂದು ನಿವೃತ್ತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಮುಖ್ಯಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.