#Exclusive Newsಕ್ರೈಂ ಸ್ಟೋರಿ

ಜೈಲಿನಲ್ಲಿ ಹರ್ಷ ಕೊಲೆ ಆರೋಪಿಗಳು ಕಿರಿಕ್‌

ಬಳ್ಳಾರಿ: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ.

ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ ಮಾಡಿ ಅವಾಜ್ ಹಾಕಿ, ಕಿರಿಕ್ ಮಾಡುತ್ತಿದ್ದಾರೆ.

ನಿತ್ಯ ಒಂದೊಂದು ಸೌಲಭ್ಯ ಕೇಳಿ ಜೈಲು ಸಿಬ್ಬಂದಿಗೆ ಧಮ್ಕಿ ಹಾಕುತ್ತಿದ್ದಾರೆ. ಜೈಲಿನಲ್ಲಿ ನಡೆದ ಹಳೆ ಘಟನೆಗಳ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕ್ತಿದ್ದಾರೆ. ನಮ್ಮನ್ನು ಸಾಮಾನ್ಯ ಕೈದಿಗಳಂತೆ ಟ್ರೀಟ್ ಮಾಡಿ ಪ್ರತ್ಯೇಕ ಕೊಠಡಿ ಕೊಡಿ, ವಿಶೇಷ ಸೌಲಭ್ಯ ನೀಡಿ ಎಂದು ಇಬ್ಬರು ಗಲಾಟೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಜೈಲಿನಲ್ಲಿ ಬೇರೇ ಬೇರೆ ಕೋಣೆಗೆ ಅಥವಾ ಜೈಲರ್ ಕೊಠಡಿಗೆ ಹೋಗುವಾಗ ಕಡ್ಡಾಯವಾಗಿ ಚೆಕಪ್ ಮಾಡಲಾಗುತ್ತದೆ. ಆದರೆ ನಮ್ಮನ್ನು ನೀವು ಪರಿಶೀಲನೆ ಮಾಡಬೇಡಿ ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೇ ಸಣ್ಣ ಪುಟ್ಟ ವಿಚಾರಕ್ಕೂ ಜೈಲು ಸಿಬ್ಬಂದಿಯನ್ನು ಆರೋಪಿಗಳು ನಿಂದಿಸುತ್ತಿದ್ದಾರೆ.
ಆರೋಪಿಗಳು ಇದೇ ರೀತಿ ಕಿರಿಕ್ ಮಾಡಿ ಬೆಂಗಳೂರು, ಗುಲ್ಬರ್ಗ, ಧಾರವಾಡ ಜೈಲಿಗೆ ಹೋಗಿದ್ದರು. ಈಗ ಅದೇ ಚಾಳಿಯನ್ನು ಬಳ್ಳಾರಿ ಜೈಲಿನಲ್ಲೂ ಮುಂದುವರಿಸುತ್ತಿದ್ದಾರೆ. ಇದು ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

Comments (0)

Your email address will not be published. Required fields are marked *

Back to top button