ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದಿವಿ ಎನ್ನುತ್ತಾರೆ; ಆದರೆ, ನಮ್ಮಿಬ್ಬರ ಸರಕಾರಗಳನ್ನು ತೆಗೆದವರು ಯಾರು?
ಹಾಸನ: ಮುಡಾ ಹಗರಣದಲ್ಲಿ ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಲು ಅರ್ಜಿ ಹಾಕಿದ್ದಾನ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ಭಾನುವಾರ ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ” ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಯಾರದ್ದೋ ಜಮೀನು, 62 ಕೋಟಿ ಕೊಟ್ಟರೆ ಪುಕ್ಸಟ್ಟೆ ಬಿಟ್ಟುಕೊಡ್ತೀರಾ ನೀವು? 1992ರಲ್ಲಿ ಅಂತಿಮ ಅಧಿಸೂಚನೆ ಆಗಿದೆ. 1998ರಲ್ಲಿ ಅವರು ಬದುಕೇ ಇರಲಿಲ್ಲ. ಡಿನೋಟಿಫೀಕೇಷನ್ ಮಾಡಿ ಎಂದು ಅರ್ಜಿ ಕೊಟ್ಟವರು ಯಾರು? ನಿಂಗ ಎನ್ನುವ ವ್ಯಕ್ತಿ ತೀರಿಕೊಂಡಿದ್ದು ಯಾವಾಗ? ಸ್ವರ್ಗದಿಂದ ಬಂದು ಅರ್ಜಿ ಕೊಟ್ಟು ಡಿನೋಟಿಫಿಕೇಷನ್ ಮಾಡಿ ಎಂದು ಕೇಳಿದ್ರಾ ಅವರು? ಆ ಜಮೀನನ್ನು ನಿಮ್ಮ ಬಾಮೈದ ಖರೀದಿ ಮಾಡಿ ದಾನ ಕೊಟ್ಟ ಎನ್ನುವುದೆಲ್ಲಾ ಬರೀ ಡ್ರಾಮಾ. ಇದರಲ್ಲಿ ನಿಮ್ಮ ಕುಟುಂಬದ ನೇರ ಪಾತ್ರ ಇದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.
ಇಲ್ಲಿಗೆ ಮಿಲಿಟರಿ ಬರುವ ಕಾಲವೂ ಬರುತ್ತದೆ. ಆವರು ಏಕೆ ಆ ರೀತಿಯ ಹೇಳಿಕೆ ಕೊಟ್ಟರು ಎಂದು ನಾನು ಯೋಚನೆ ಮಾಡಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂಬರ್ಥದಲ್ಲಿ ಅವರು ಹೇಳಿಕೆ ಕೊಟ್ಟಿರಬಹುದು. ಮಿಲಿಟರಿ ಬರುವ ಕಾಲವೂ ಬರುತ್ತದೆ, ಆಗ ಕರೆದುಕೊಂಡು ಬರೋಣವಂತೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.
ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರ ದ ಸಹಕಾರ ಕೇಳುವ ರಾಜ್ಯ ಸರ್ಕಾರ ವು ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ನಿನ್ನೆಯ ದಿನ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್ ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಕುಮಾರಸ್ವಾಮಿ ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು ಎಷ್ಟು ಸರಿ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ದಲಿತರಿಗೆ ಸೇರಿದ ಭೂಮಿ
ಕಳೆದ ಒಂದು ಕಾಲ ವರ್ಷದಿಂದ ಅವರು ಆಡಳಿತ ನಡೆಸುತ್ತಿದ್ದಾರೆ. 2010-2011 ಇಸವಿಯದ್ದು ಈಗ ಮಾತನಾಡುತ್ತಿದ್ದೀರಾ, ಅವತ್ತು ನಿಮ್ಮ ಗಮನಕ್ಕೆ ಬಂದಿರಲಿಲ್ಲವಾ? ನೀವು ಮಾಡಿರುವ ಅಕ್ರಮಗಳನ್ನು ಮುಚ್ಚಿಕೊಳ್ಳಲು ಈಗ ತನಿಖೆ ಮಾಡಿಸುತ್ತೇವೆ ಎಂದು ಹೇಳುತ್ತಿದ್ದೀರಾ? ಯಾವ ತನಿಖೆ ನಡೆಸಿ ಯಾರ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಿ? ಸ್ವತಂತ್ರವಾದ ಸರ್ಕಾರ ವನ್ನು ಜನರು ನನಗೆ ಕೊಡಲಿಲ್ಲ. ನನಗೆ ಕೆಲ ವರದಿಗಳನ್ನು ಕೊಡಲು ಬಿಡಲಿಲ್ಲ. ಮೈಸೂರಿನ ಮುಡಾದಲ್ಲಿ ಅಷ್ಟೆಲ್ಲಾ ತಪ್ಪು ಮಾಡಿ ನನ್ನ ಬಾಮೈದ ತಪ್ಪು ಮಾಡಿದ್ದಾನೆ ಎಂದು ಅವರ ಮೇಲೆ ಹೇಳುತ್ತಿದ್ದಾರೆ ಇವರು. ಆ ಭೂಮಿಯನ್ನು ನಿಮ್ಮ ಬಾಮೈದ ತೆಗೆದುಕೊಳ್ಳಲು ಅವಕಾಶ ಇತ್ತಾ? ಅದು ದಲಿತರಿಗೆ ಸೇರಿದ ಭೂಮಿ ಎಂದು ಕಿಡಿಕಾರಿದರು.
ಇಲ್ಲಿಗೆ ಮಿಲಿಟರಿ ಬರುವ ಕಾಲವೂ ಬರುತ್ತದೆ. ಆವರು ಏಕೆ ಆ ರೀತಿಯ ಹೇಳಿಕೆ ಕೊಟ್ಟರು ಎಂದು ನಾನು ಯೋಚನೆ ಮಾಡಿದೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂಬರ್ಥದಲ್ಲಿ ಅವರು ಹೇಳಿಕೆ ಕೊಟ್ಟಿರಬಹುದು. ಮಿಲಿಟರಿ ಬರುವ ಕಾಲವೂ ಬರುತ್ತದೆ, ಆಗ ಕರೆದುಕೊಂಡು ಬರೋಣವಂತೆ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ತಿರುಗೇಟು ಕೊಟ್ಟರು.
ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರ ದ ಸಹಕಾರ ಕೇಳುವ ರಾಜ್ಯ ಸರ್ಕಾರ ವು ಒಬ್ಬ ಕೇಂದ್ರ ಸಚಿವ ರಾಜ್ಯಕ್ಕೆ ಬರುವುದನ್ನು ಸಹಿಸುತ್ತಿಲ್ಲ. ನಿನ್ನೆಯ ದಿನ ಉತ್ತರ ಕನ್ನಡ ಜಿಲ್ಲೆಯ ಶಿಶೂರು ಬಳಿ ಗುಡ್ಡ ಕುಸಿದ ಸ್ಥಳಕ್ಕೆ ನಾನು ಭೇಟಿ ನೀಡಿದಾಗ ಐದು ಕಿ.ಮೀ. ಹಿಂದೆಯೇ ಬ್ಯಾರಿಕೇಡ್ ಗಳನ್ನು ಹಾಕಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಯಿತು. ಕುಮಾರಸ್ವಾಮಿ ಮಳೆಹಾನಿ ಸಮೀಕ್ಷೆ ನಡೆಸಿದ್ದನ್ನು ವರದಿ ಮಾಡಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದು ಎಷ್ಟು ಸರಿ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.
ನನ್ನಿಂದ ಏನು ನಿರೀಕ್ಷೆ ಮಾಡುತ್ತಾರೆ
ಯಾವ ಸರ್ಕಾರ ವೂ ಹತ್ತು ಲಕ್ಷ ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂದು ಸಚಿವ ಮಂಕಾಳ ವೈದ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರ, ; ಅವರಿಗೆ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಇದ್ದಂತೆ ಇಲ್ಲ. ಅವರಿಗೆ ಸಮಯ ಸಿಕ್ಕಿದರೆ ಕೊಡುಗು ಜಿಲ್ಲೆಗೆ ಭೇಟಿ ನೀಡಲಿ. 2018 ರಲ್ಲಿ ನಾನು ಸಿಎಂ ಆಗಿದ್ದಾಗ ಅಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾದಾಗ ಅನೇಕರು ಮನೆಮಠ ಆಸ್ತಿಗಳನ್ನು ಕಳೆದು ನಿರಾಶ್ರಿತರಾಗಿದ್ದರು. ಕೆಲವೇ ತಿಂಗಳಲ್ಲಿ ಎಲ್ಲಾ ನಿರಾಶ್ರಿತ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ಕಟ್ಟಿಕೊಡಲಾಯಿತು. ಜತೆಗೆ; ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ, ಆಹಾರ ಪದಾರ್ಥ ಕೊಳ್ಳಲು ಐವತ್ತು ಸಾವಿರ ರೂ. ಕೊಟ್ಟಿದ್ದೇವೆ. ಬಹುಶಃ ಸಚಿವರಿಗೆ ಇದೆಲ್ಲಾ ಗೊತ್ತಿಲ್ಲದೆ ಇರಬಹುದು. ದಯಮಾಡಿ ಅವರು ಬಿಡುವು ಮಾಡಿಕೊಂಡು ಹೋಗಿ ಕೊಡಗಿನಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಿ ಎಂದು ಸಲಹೆ ಮಾಡಿದರು.
ರಾಮನಗರದಲ್ಲಿ ಬೆಂಗಳೂರು ಕಸ ಸುರಿಯಲು ಹುನ್ನಾರ
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ನಡೆಯುತ್ತಿರುವ ಹುನ್ನಾರದ ಬಗ್ಗೆ ಟೀಕಿಸಿದ ಕೇಂದ್ರ ಸಚಿವರು; ರಾಮನಗರ ಹೆಸರು ಬದಲಾವಣೆ ಮಾಡಲು ಆಗುತ್ತಾ? ಅವರ ಹೆಸರು ಬದಲಾವಣೆ ಮಾಡಲು ಆಗದಿದ್ದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಆಗುತ್ತದೆಯೇ? ಅದರ ಬಗ್ಗೆ ಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. 1989ರಲ್ಲಿ ಇವರು ಸಾತನೂರಿನಲ್ಲಿ ಶಾಸಕರಾಗಿರಲಿಲ್ಲವೇ? ಹೇಗಿತ್ತು ಸಾತನೂರು?
ಇವರ ಬ್ರ್ಯಾಂಡ್ ಬೆಂಗಳೂರು ರೀತಿ ರಾಮನಗರವನ್ನೂ ಅಭಿವೃದ್ಧಿ ಮಾಡಬೇಕಾ? ರಾಮನಗರ ಜಿಲ್ಲೆ ಅಭಿವೃದ್ಧಿಯಾಗಿ ಹತ್ತು ವರ್ಷಗಳಾಯಿತು. ಇವರು ಬಂದು ಏನು ಅಭಿವೃದ್ಧಿ ಮಾಡುತ್ತಾರೆ? ಈಗ ಬೆಂಗಳೂರಿನ ಜಾಗವನ್ನು ಯಾವನಿಗೋ 45 ಸಾವಿರ ಕೋಟಿಗೆ ಮೂವತ್ತು ವರ್ಷ ಲೀಸ್ʼಗೆ ಕೊಡಲು ಹೊರಟಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡೋದು ಕಸ ತುಂಬಿಸಲಿಕ್ಕಾ? ರಾಮನಗರ ತೆಗೆದು ಬೆಂಗಳೂರು ದಕ್ಷಿಣ ಹೆಸರಿಡುವುದು ಬೆಂಗಳೂರಿನ ಕಸ ತಂದು ತುಂಬಿಸಲಿಕ್ಕಾ? ಕಪ್ಪುಪಟ್ಟಿಯಲ್ಲಿ ಇದ್ದವರನ್ನು ಕರೆದುಕೊಂಡು ಬಂದು ಲೀಸ್ ಕೊಡಲು ಹೊರಟಿದ್ದೀರಾ? ಸುಮ್ಮನೆ ಬಾಯಿ ಚಪಲಕ್ಕೆ ಹೇಳುತ್ತಿಲ್ಲ ನಾನು, ಸರಕಾರದಲ್ಲಿ ಏನೇನು ನಡೆದಿದೆ ಎಲ್ಲಾ ಮಾಹಿತಿ ಸಂಗ್ರಹ ಮಾಡಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ
ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರ ಮಾಡಿಲ್ಲ. ಯಾರೇ ಅಭ್ಯರ್ಥಿಯಾದರೂ ಅವರು ಎನ್ಡಿಎ ಅಭ್ಯರ್ಥಿಯಾಗುತ್ತಾರೆ. ಎನ್ಡಿಎ ಅಭ್ಯರ್ಥಿ ನಿಲ್ಲುವುದಷ್ಟೇ ಅಲ್ಲ, ಗೆಲ್ಲಲೇಬೇಕು. ಗೆಲ್ಲುವುದಕ್ಕೆ ಏನೆಲ್ಲಾ ನಿರ್ಧಾರ ಮಾಡಬೇಕೋ ಅದನ್ನೆಲ್ಲಾ ಮಾಡುತ್ತೇವೆ. ಯಾರು ಅಭ್ಯರ್ಥಿ ಎಂದು ಇನ್ನೂ ಚರ್ಚೆ ಹಂತಕ್ಕೆ ಬಂದಿಲ್ಲ. ಕೇಂದ್ರದ ನಾಯಕರು, ರಾಜ್ಯದ ಬಿಜೆಪಿ ನಾಯಕರು ಎಲ್ಲಾ ಕುಳಿತು ಚರ್ಚೆ ಮಾಡುತ್ತೇವೆ. ಯೋಗೇಶ್ವರ್ ಅವರು ಗೆಲ್ಲಲು ಅವಕಾಶ ಇದ್ದರೆ ಅವರೇ ಚುನಾವಣೆಗೆ ನಿಲ್ಲುತ್ತಾರೆ. ಇಲ್ಲವೆಂದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಕೆ.ಕುಮಾರಸ್ವಾಮಿ, ಶಾಸಕ ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜುನಾಥ್, ಹೆಚ್.ಕೆ.ಸುರೇಶ್ ಮುಂತಾದವರು ಹಾಜರಿದ್ದರು