#Exclusive NewsTop News

ಹಾಸನ: ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

 


ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಕಾಡಾನೆ ಮೃತಪಟ್ಟಿದೆ. ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ, ಅಕ್ಟೋಬರ್​ 17: ಸಕಲೇಶಪುರ (Sakleshpur) ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು (Elephant) ಮೃತಪಟ್ಟಿದೆ. ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ವಿದ್ಯುತ್​ ತಂತಿ ಸ್ಪರ್ಶಿಸಿ ಅಂದಾಜು 25 ವರ್ಷದ ಒಂಟಿಸಲಗ ಸಾವಿಗೀಡಾಗಿದೆ. ಆನೆ ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Comments (0)

Your email address will not be published. Required fields are marked *

Back to top button