Wednesday, December 10, 2025
26.8 C
Bengaluru
Google search engine
LIVE
ಮನೆರಾಜ್ಯಅ.9ಕ್ಕೆ ಹಾಸನಾಂಬ ಗರ್ಭಗುಡಿ ಓಪನ್​; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ​!

ಅ.9ಕ್ಕೆ ಹಾಸನಾಂಬ ಗರ್ಭಗುಡಿ ಓಪನ್​; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ​!

ಹಾಸನ: ವರ್ಷಕ್ಕೊಮ್ಮೆ ನಡೆಯುವ ಶ್ರೀ ಹಾಸನಾಂಬಾ ಜಾತ್ರೋತ್ಸವಕ್ಕೆ ಇನ್ನು 4 ದಿನ ಬಾಕಿ ಉಳಿದಿದ್ದು, ಮುಂದಿನ ವಾರದಿಂದ ಭಕ್ತರಿಗೆ ಹಾಸನಾಂಬ ದರ್ಶನ ಸಿಗಲಿದೆ.

ಗುರುವಾರ, ಅಕ್ಟೋಬರ್ 9, 2025 ರಂದು ಮಧ್ಯಾಹ್ನ 12:30ಕ್ಕೆ ದೇವಾಲಯದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ಜಿಲ್ಲಾಡಳಿತವು ಬಿರುಸಿನ ಸಿದ್ಧತೆಯಲ್ಲಿ ತೊಡಗಿದೆ. ಈ ವರ್ಷದ ಜಾತ್ರಾ ಮಹೋತ್ಸವವು ಅಕ್ಟೋಬರ್ 9 ರಿಂದ 23 ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಅಕ್ಟೋಬರ್ 10 ರಿಂದ 22 ರವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ. ಆದರೆ, ಮೊದಲ ದಿನ ಅ. 9 ಮತ್ತು ಕೊನೆಯ ದಿನ (ಅಕ್ಟೋಬರ್ 23) ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುವುದಿಲ್ಲ.

ಇನ್ನು ಶಕ್ತಿ ಸ್ವರೂಪಿಣಿಯಾದ ಶ್ರೀ ಹಾಸನಾಂಬ ದೇವಿಯ ದರ್ಶನ ಭಾಗ್ಯವನ್ನು ಕರುಣಿಸುವ ಈ ವಿಶೇಷ ಉತ್ಸವಕ್ಕಾಗಿ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಹಾಸನಾಂಬೆ ದರ್ಶನಕ್ಕೆ ರಾಜ್ಯ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ನಡೆಸುತ್ತಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments