ಹಾವೇರಿ : ಫೈನಾನ್ಸ್ ಸಿಬ್ಬಂದಿಗಳ ಕಿರುಕುಳದಿಂದ ಇತ್ತೀಚಿಗೆ ಹಲವಾರು ಜನರು ಆತ್ಮಹತ್ಯೆ ಹಾಗೂ ಸಾಕಷ್ಟು ಕುಟುಂಬಗಳು ಗ್ರಾಮ ತೊರೆದಿರುವುದನ್ನು ನೋಡಿದ್ದೇವೆ ಆದರೆ ,ಇದೀಗ ಇದರ ವಿರುದ್ಧ ಹಾವೇರಿಯಲ್ಲಿ ಮಹಿಳೆಯರು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಹಾವೇರಿಯ ಮಹಿಳೆ ಪೋಸ್ಟ್ ಬಾಕ್ಸ್ ನಲ್ಲಿ ಮಂಗಳಸರವನ್ನು ಪ್ಯಾಕ್ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಳುಹಿಸಿ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ನೊಂದ ಮಹಿಳೆಯರು ಹಾಗೂ ರೈತ ಮುಖಂಡರು ‘ಮಾಂಗಲ್ಯ ಸರ ಉಳಿಸಿ’ ಎಂಬ ಅಭಿಯಾನ ಆರಂಭಿಸಿದ್ದು, ಹಾವೇರಿ ನಗರದ ಅಂಚೆ ಕಚೇರಿ ಮೂಲಕ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಂಗಲ್ಯ ಸರವನ್ನೇ ರವಾನಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಮನೆಯಲ್ಲಿ ನೆಮ್ಮದಿಯಾಗಿ ಇರುವಂತಿಲ್ಲ. ಮನೆಗೆ ಬಂದರೆ ಇವರ ಕಿರುಕುಳ, ಇವರು ಬಂದರೆ ಸುತ್ತಮುತ್ತಲಿನವರ ಮೂದಲಿಕೆ ಕೇಳುವಂ ತಾಗಿದೆ. ಹೀಗಾಗಿ ಕಿರುಕುಳ ತಪ್ಪಿಸಿ, ಮಾಂಗ ಲ್ಯ ಉಳಿಸಿ ಎಂದು ಮಹಿಳೆಯರು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಎಸ್ಪಿ ಕಚೇರಿಗೆ ತೆರಳಿದ ಮಹಿಳೆಯರುಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಎಸ್ಪಿ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.