Freedom TV

ರಾಜ್ಯ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಹೆಚ್.ಸಿ.ಸತ್ಯನ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಹಂಗಾಮಿ ಮುಖ್ಯ ಮಾಹಿತಿ ಆಯುಕ್ತರಾಗಿ ಡಾ. ಹೆಚ್.ಸಿ ಸತ್ಯನ್ ಅವರನ್ನು ಶನಿವಾರ ನೇಮಿಸಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ರ ನಿಯಮ 12 ಎ ಅಡಿಯಲ್ಲಿ, ಕರ್ನಾಟಕ ರಾಜ್ಯಪಾಲ ಐ.ಥಾವರ್ ಚಂದ್ ಗೆಹ್ಲೋಟ್ ಅವರು 06.05.2024 ರಿಂದ ಜಾರಿಗೆ ಬರುವಂತೆ ಹೊಸ ರಾಜ್ಯ ಮುಖ್ಯ ಮಾಹಿತಿ ಆಯುಕ್ತರನ್ನು ನೇಮಕ ಮಾಡುವವರೆಗೆ ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮುಖ್ಯ ಮಾಹಿತಿ ಆಯುಕ್ತರ ಹುದ್ದೆಯ ಉಸ್ತುವಾರಿ ರಾಜ್ಯ ಮಾಹಿತಿ ಆಯುಕ್ತ ಡಾ.ಎಚ್.ಸಿ.ಸತ್ಯನ್ ಅವರನ್ನು ನೇಮಕ ಮಾಡಲಾಗಿದೆ ಎಂದಿದೆ.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

 

Comments (0)

Your email address will not be published. Required fields are marked *

Back to top button