
ಬೆಂಗಳೂರು: ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಸ್ಪೀಕರ್ ಯಟಿ ಖಾದರ್ ಕೊಠಡಿಗೆ ಆಗಮಿಸಿದ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರು. ರಾಜೀನಾಮೆ ಸಲ್ಲಿಸುವ ವೇಳೆ ಜಿಟಿ ದೇವೇಗೌಡ, ಭೋಜೇಗೌಡರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಗೆದ್ದ ಕುಮಾರಸ್ವಾಮಿ ಮೋದಿ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರಾಗಿ ನೇಮಕವಾಗಿದ್ದಾ
ಇಂದು ರಾಜೀನಾಮೆ ನೀಡುವ ಮೊದಲು ಬೆಳಗ್ಗೆ ಕುಮಾರಸ್ವಾಮಿ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದ್ದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com
Phone Number : +91-9164072277
Email id : salesatfreedomtv@gmail.com




