Top Newsಸುದ್ದಿ

ಸಿದ್ದರಾಮಯ್ಯ ಪ್ರಾಸಿಕ್ಯೂಷನ್​- ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಬೆಂಗಳೂರು: ನನ್ನಿಂದ ಏನೇ ತಪ್ಪು ಆಗಿರದಿದ್ದರೂ ನಾನು ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಾಸೀಕ್ಯೂಷನ್ ಸಂಬಂಧ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಸಂಬಂಧ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹ ವ್ಯಕ್ತಪಡಿಸಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಇಲ್ಲ ಎಂದು ಹೇಳಿದ್ದಾರೆ.

ಅಂದು ಕೂಡ ನಾನು ರಾಜೀನಾಮೆ ಕೇಳಿಲ್ಲ. ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ನ್ಯಾಯಾಲಯ, ಕಾನೂನು ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ತಪ್ಪು ಮಾಡಿದರೆ ನ್ಯಾಯಾಲಯಗಳು ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡುತ್ತವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button