ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಈಗ ಜೈಲಿನ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದಾರೆ. ಸೋಮವಾರ ಭವಾನಿ ರೇವಣ್ಣ ಮಗನನ್ನು ನೋಡಲು ಬಂದಿದ್ದರು. ಈಗ ಮಗನನ್ನು ನೋಡಲು ಹೆಚ್‌ಡಿ ರೇವಣ್ಣ ಆಗಮಿಸಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ರೇವಣ್ಣ, ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದಿದ್ದರು.
ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ್ದ ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಎಂತೆಂಥವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದು ಹೇಳಿದ್ದರು.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com


