ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಅಪ್ಪಟ ಅಭಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನದೊಡ್ಡಿಯ ಮಹದೇವು (31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಮಹದೇವು ಸಾವಿಗೆ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮೃತ ಮಹದೇವು ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಕುಮಾರಣ್ಣನವರ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿ ನಮಗೆಲ್ಲ ತೀವ್ರ ನೋವಾಯಿತು. ಯಾವ ಕಾರಣಕ್ಕೆ ಈ ಹೆಜ್ಜೆ ಇಟ್ಟರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಹೋದ ಜೀವನ ವಾಪಸ್ ಬರುವುದಿಲ್ಲ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಖಂಡಿತವಾಗಿಯೂ ನಾವು ನೆರವು ನೀಡುತ್ತೇವೆ ಎಂದರು. ಇದೇ ವೇಳೆ ಮಹದೇವು ಕುಟುಂಬದ ಜೀವನೋಪಾಯಕ್ಕೆ ಪಕ್ಷದಿಂದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.


