Tuesday, March 3, 2026
22.4 C
Bengaluru
Google search engine
LIVE
ಮನೆ#Exclusive NewsTop Newsಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ಅವರು ಇಂದು ನಿಧನ ಹೊಂದಿದ್ದಾರೆ. ಇದು ಮಲಯಾಳಂ ಚಿತ್ರರಂಗಕ್ಕೆ ಸಖತ್ ಶಾಕಿಂಗ್ ಎನಿಸಿದ್ದು, ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ.ಮುಂಜಾನೆ ಅವರಿಗೆ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ. ಅವರ ನಿಧನಕ್ಕೆ ಅನೇಕರಿಗೆ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ. ಮಲಯಾಳಂನಲ್ಲಿ 12 ವರ್ಷಗಳಲ್ಲಿ ಅವರು ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

2012ರಲ್ಲಿ ನಿರ್ಮಲ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ನವಗತರ್ಕ್ ಸ್ವಾಗತಂ’ ಅವರ ನಟನೆಯ ಮೊದಲ ಸಿನಿಮಾ. ನಿರ್ಮಲ್ ಅವರು ಲಿಜೋ ಜೋಸ್ ಪೆಲ್ಲಿಸೆರಿ ನಿರ್ದೇಶನದ ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರ ಮಾಡಿದರು. ಈ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರು ಈವರೆಗೆ ಕೇವಲ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

ನಿರ್ಮಲ್ ಅವರು ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಸ್ಟೇಜ್ ಕಾರ್ಯಕ್ರಮಗಳನ್ನು ಅವರು ನೀಡಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ‘ಅಮೆನ್ ಸಿನಿಮಾದಲ್ಲಿ ಕೊಚ್ಚನ್ ಹಾಗೂ ದೂರಂ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ನಿರ್ಮಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಆಯಿತು. ಗೆಳೆಯನೇ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೋರಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments