ದೇಶ/ವಿದೇಶ

ಗುಜರಾತ್​​ನಲ್ಲಿ ಭಾರಿ ಮಳೆಗೆ 22 ಜನ ಸಾವು..!

ಗುಜರಾತ್​​​ನಲ್ಲಿ ಭಾರಿ ಮಳೆ ಸುರೀತಿದೆ.. ರಣಭೀಕರ ಮಳೆಗೆ ಎಲ್ಲೆಲ್ಲೂ ಪ್ರವಾಹ ಸನ್ನಿವೇಶ ಉಂಟಾಗಿದೆ. ಧಾರಾಕಾರ ಮಳೆಯಿಂದ 48 ಗಂಟೆಗಳಲ್ಲಿ ಬರೋಬ್ಬರಿ 22 ಜನರು ಸಾವನ್ನಪ್ಪಿದ್ದಾರೆ. NDRF ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.. ಗುಜರಾತ್‌ನ ಹಲವಾರು ಜಿಲ್ಲೆಗಳಲ್ಲಿ ಮುಖ್ಯವಾಗಿ ಸೌರಾಷ್ಟ್ರ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ..

ಬೊಟಾಡ್ ಜಿಲ್ಲೆಯಲ್ಲಿ 9 ಪ್ರಯಾಣಿಕರಿದ್ದ ಕಾರೊಂದು ನದಿಯಲ್ಲಿ ಕೊಚ್ಚಿಹೋಗಿದೆ. ಇಂದು ನಾಲ್ವರ ಮೃತದೇಹ ಪತ್ತೆಯಾಗಿದೆ. ಮೂವರು ನಾಪತ್ತೆಯಾಗಿದೆ. ಇಬ್ಬರನ್ನು ರಕ್ಷಿಸಲಾಗಿದೆ.

ಸೌರಾಷ್ಟ್ರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಭಾರಿ ಮಳೆಯು ವ್ಯಾಪಕ ಪ್ರವಾಹಕ್ಕೆ ಕಾರಣವಾಗಿದೆ. ಬಲವಾದ ಪ್ರವಾಹದಿಂದ ನಿವಾಸಿಗಳು ಕೊಚ್ಚಿ ಹೋಗುತ್ತಿರುವುದನ್ನು ತೋರಿಸುವ ಆತಂಕಕಾರಿ ದೃಶ್ಯಗಳು ಕಂಡುಬರುತ್ತಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಅಧಿಕಾರಿಗಳು ಜನರನ್ನು ತುರ್ತು ಸ್ಥಳಾಂತರಿಸುವ ಪ್ರಯತ್ನಗಳನ್ನು ಪ್ರಾರಂಭಿಸಿದ್ದಾರೆ. ಜೀವಗಳನ್ನು ಉಳಿಸುವುದು, ಆಸ್ತಿಯನ್ನು ರಕ್ಷಿಸುವುದು ಮತ್ತು ಅಗತ್ಯ ಸಾಮಗ್ರಿಗಳ ನಿರಂತರತೆಯನ್ನು ಖಚಿತಪಡಿಸಿಕೊಳ್ಳುವುದರ ಮೇಲೆ ಅಧಿಕಾರಿಗಳು ಗಮನ ಹರಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ರಕ್ಷಿಸಲು ಗುಜರಾತ್‌ನ ಭಾವನಗರ ಜಿಲ್ಲೆಯ ಶಾಲೆಗಳನ್ನು ಮುಚ್ಚಲಾಗಿದೆ.

 

Comments (0)

Your email address will not be published. Required fields are marked *

Back to top button