Top Newsಸುದ್ದಿ

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ  ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಸೃಷ್ಠಿಯಾಗಲಿದ್ದು, ನಗರದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

Comments (0)

Your email address will not be published. Required fields are marked *

Back to top button