Wednesday, April 30, 2025
24 C
Bengaluru
LIVE
ಮನೆ#Exclusive Newsಭಾರಿ ಮಳೆ ಮುನ್ಸೂಚನೆ: ಅಧಿಕಾರಿಗಳ ರಜೆ ರದ್ದು..!

ಭಾರಿ ಮಳೆ ಮುನ್ಸೂಚನೆ: ಅಧಿಕಾರಿಗಳ ರಜೆ ರದ್ದು..!

ಕೇಂದ್ರ ಸ್ಥಾನದಲ್ಲೇ ಇರಿ, ಮುನ್ನೆಚ್ಚರಿಕೆ ವಹಿಸಿ: ತುಷಾ‌ರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರು ವುದರಿಂದ ಬಿಬಿಎಂಪಿ ಅಧಿಕಾರಿ ಗಳು ರಜೆ ದಿನವಾದ ಭಾನುವಾರ ನಗರದ ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದ್ದಾರೆ.

ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭಾನುವಾರ ವಲಯ ಅಧಿಕಾರಿಗಳು, ಎಂಜಿನಿಯರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಹಾಜರಿದ್ದು, ಮಳೆಯಾಗುವ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಆಯಾ ವಲಯದ ಹಿರಿಯ ಅಧಿಕಾರಿಗಳು ಈ ಕುರಿತು ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿದ್ದಾರೆ.

ಆಯಾ ವಲಯದ ಎಲ್ಲ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮಳೆಯೊಂದಿಗೆ ಗಾಳಿ ಕೂಡಾ ಹೆಚ್ಚಾಗಿ ಬರುವ ಸಾಧ್ಯತೆ ಇರುವುದರಿಂದ 28 ಮರ ಕಟಾವು ತಂಡಗಳು ಸಿದ್ಧವಾಗಿರ ಬೇಕು. ಮರ ಹಾಗೂ ಮರದ ರೆಂಬೆ-ಕೊಂಬೆಗಳು ಬಿದ್ದ ದೂರುಗಳು ಬಂದ ಕೂಡಲೇ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ನೀರು ನಿಲ್ಲುವ ಸ್ಥಳದಲ್ಲಿ ಯಂತ್ರೋಪಕರಣಗಳು, ಪಂಪ್ ಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ಈ ಹಿಂದೆ ಮಳೆಯಿಂದ ಜಲಾವೃತಗೊಂಡ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಮರಳು ಚೀಲಗಳನ್ನು ಇಟ್ಟುಕೊಂಡು ಮಳೆ ಯಿಂದಾಗುವ ಸಮಸ್ಯೆ ತಪ್ಪಿಸಲು ಪರಿಹಾರ ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕೆಂದು ಸೂಚಿಸಿದರು. ರಸ್ತೆ ಬದಿಯ ಶೋಲ್ಡರ್ ಚರಂಡಿಗಳಿಗೆ ಸರಾಗವಾಗಿ ನೀರು ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments