ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೂ ಇಂದು ಹಾಗೂ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರದ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಒಳನಾಡಿಗೆ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com